ಅಡಿಕೆ ಕದ್ದ ಆರೋಪ : ಅಪ್ರಾಪ್ತ ಬಾಲಕನಿಗೆ ಹಲ್ಲೆ
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಗಳ ಪತ್ತೆ ಪೊಲೀಸರು ಬಲೆ ಬೀಸಿದ್ದಾರೆ.