ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನ : ವಿಜ್ಞಾಪನ ಪತ್ರ ಬಿಡುಗಡೆ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬುಧವಾರ ಬೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.ಅರ್ಚಕರು ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ದೇವಳದ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು.
ಮುಂದಿನ ವರ್ಷ ನಡೆಯಲಿರುವ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ ವಿಜ್ಞಾಪನ ಪತ್ರವನ್ನು ಶಾಸಕ ಹರೀಶ್ ಪೂಂಜಾ ಬಿಡುಗಡೆ ಮಾಡಿದರು. ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷೆ ಗಂಗಮ್ಮ, ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷ ನವೀನ್, ನೂಜಿಬಾಳ್ತಿಲ ಗ್ರಾ.ಪಂ. ಸದಸ್ಯರಾದ ಚಂದ್ರಶೇಖರ ಗೌಡ ಹಳೆನೂಜಿ, ಚಂದ್ರಾವತಿ ಜಾಲು, ವಿಜಯಲಕ್ಷ್ಮಿ ಅರಿಮಜಲು, ವಿನಯ ಕುಮಾರಿ ಬಳಕ್ಕ, ದೇವಸ್ಥಾನದ ವಿವಿಧ ಸಮಿತಿ ಪದಾಧಿಕಾರಿಗಳು, ಊರ ಪರ ಊರಿನ ಭಕ್ತರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.