ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು.

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯನ್ನು ಕರ್ನಾಟಕ ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಸಾಹಿತ್ಯ ಚಿಂತಕ ಸಾಧಕರಾದ ಕದ್ರಿ ನವನೀತ ಶೆಟ್ಟಿ ಬಿಡುಗಡೆಗೊಳಿಸಿದರು. ಬಳಿಕ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ದಂತವೈದ್ಯ ಹಾಗೂ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ಡಾ. ಮುರಳಿ ಮೋಹನ್ ಚೂಂತಾರು ಮಾತನಾಡಿ ಇಂತಹಾ ಸಂಕಷ್ಟದ ಸಂದರ್ಭದಲ್ಲಿ ಪತ್ರಿಕೆ ನಡೆಸುವ ಕಷ್ಟ ಆದರೆ ಕಳೆದ 8 ವರ್ಷದಿಂದ ಈ ಪತ್ರಿಕೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ ಮತ್ತು ಈ ಮೊಬೈಲ್ ಯುಗದಲ್ಲಿ ಜನರನ್ನು ಓದುವತ್ತ ಪ್ರೆರೇಪಿಸುತ್ತಿರುವುದು ಸಂತೋಷದ ವಿಚಾರ ಎಂದು ಹೇಳಿದರು.

ಈ ಸಂದರ್ಭ ಸೂರ್ಯವಂಶ ಪ್ರತಿಷ್ಠಾನ, ಕೈಕಂಬ ಇದರ ಸಂಸ್ಥಾಪಕ ಪ್ರೋಪೆಸರ್ ಡಾ.ಗೋವರ್ಧನ ರಾವ್, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ, ಮಾಣೂರು, ಲೇಖಕಿ ಸುರೇಖ ಯಾಳವಾರ ಉಪಸ್ಥಿತರಿದ್ದರು.

Related Posts

Leave a Reply

Your email address will not be published.