ಅ.2 ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಆಂದೋಲನ
ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಮಾನ್ಯ ಪ್ರಧಾನ ಮಂತ್ರಿಗಳ ಕಲ್ಪನೆಯಂತೆ ಸ್ವಚ್ಚತಾ ಆಂದೋಲನ ನಡೆಯಲಿದ್ದು. ನಮ್ಮ ಇಲಾಖೆಯ ವತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿರುವ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಏಕ ಕಾಲಕ್ಕೆ ಸ್ವಚ್ಚತಾ ಆಂದೋಲನ ನಡೆಯಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು
ಅವರು ಮಂಗಳೂರಿನಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿ ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಮಾನ್ಯ ಪ್ರಧಾನ ಮಂತ್ರಿಗಳ ಕಲ್ಪನೆಯಂತೆ ಸ್ವಚ್ಚತಾ ಆಂದೋಲನ ನಡೆಯಲಿದೆ ಅದರಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಮ್ಮ ರಾಜ್ಯ 6,529 ಹಾಸ್ಟಲ್ ಮತ್ತು ವಸತಿ ಶಾಲೆಗಳಲ್ಲಿ ಸ್ವಚ್ಚತಾ ಆಂದೋಲನ ಏಕ ಕಾಲದಲ್ಲಿ ನಡೆಯಲಿದೆ. ಸುಮಾರು 3 ಲಕ್ಷದ 42 ಸಾವಿರ ವಿದ್ಯಾರ್ಥಿಗಳು ಮತ್ತು 42 ಸಾವಿರ ಇಲಾಖಾ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ ಮತ್ತು ಇಲಾಖೆಯ ಸಚಿವನಾಗಿ ನಾನು ನಾಳೆ ಕದ್ರಿಯ ಹಾಸ್ಟೆಲ್ನಲ್ಲಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಸುತ್ತಿದ್ದೇನೆ ಎಂದು ಹೇಳಿದರು.
ಜಿಲ್ಲಾ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂಪಲ, ಜಿಲ್ಲಾ ಬಿ.ಜೆ.ಪಿ ವಕ್ತಾರ ಜಗದೀಶ್ ಶೇಣವ,ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಯೋಗೀಶ್, ಹಿಂದುಳಿದ ವರ್ಗಗಳ ಜಿಲ್ಲಾ ಮಟ್ಟದ ಅಧಿಕಾರಿ ಸಚಿನ್ ಕುಮಾರ್ ಉಪಸ್ಥಿತರಿದ್ದರು.