ಆಗಸ್ಟ್ 1ರಂದು ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ನೆರೆವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಯು.ಟಿ. ಖಾದರ್, ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಜೆ.ಆರ್.ಲೋಬೋ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕರಾದ ಮೊಯ್ದಿನ್ ಬಾವಾ, ವಸಂತ ಬಂಗೇರಾ, ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ರಘು, ಮೂಡ ಮಾಜಿ ಅಧ್ಯಕ್ಷರಾದ ಕೆ. ಸುರೇಶ್ ಬಲ್ಲಾಳ್, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಸದಾಶಿವ ಉಳ್ಳಾಲ್, ಮಾಜಿ ಕೆಪಿಸಿಸಿ ಕಾರ್ಯದರ್ಶಿ ರಾಜೇಶ್ ಕೋಟ್ಯಾನ್ ಸೇರಿದಂತೆ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.