ಆಲೂರಿನಲ್ಲಿ ಹೆಚ್ಚುತ್ತಿರುವ ಅಕ್ರಮ ಮರಳುಗಾರಿಕೆ : ಸೂಕ್ತ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ
ಆಲೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ಅತಿ ಹೆಚ್ಚಾಗಿ ಅಕ್ರಮ ಮರಳುಗಾರಿಕೆ ಹೆಚ್ಚಾಯಿತು. ತಾಲೂಕಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜ್ ಹೇಳಿದರು.
ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ಹಿಂದೆ ಮರಳುಗಾರಿಕೆ ನಡೆಸುತ್ತಿದ್ದ ರಸ್ತೆಗಳು ಸರ್ಕಾರದಿಂದ ಅನುಮತಿ ಪಡೆದು ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಆದರೆ ಇತ್ತೀಚೆಗೆ ಅಕ್ರಮ ಮರಳುಗಾರಿಕೆ ಹೆಚ್ಚಾಗಿದ್ದು ವ್ಯಕ್ತಿಗಳು ಇದನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಆದರೂ ಕೂಡ ತಾಲೂಕು ಆಡಳಿತವಾಗಲಿ ಅಥವಾ ತಾಲೂಕು ಪೊಲೀಸ್ ಇಲಾಖೆಯ ಮೇಲೆ ಕಂಡೂ ಕಾಣದಂತೆ ಕಣ್ಮುಚ್ಚಿ ಕುಳಿತಿದೆ. ಈ ಕುರಿತಾಗಿ ತಕ್ಷಣವೇ ಕ್ರಮ ಕೈಗೊಂಡು ಅಕ್ರಮ ಮರಳುಗಾರಿಕೆಯನ್ನು ಹತೋಟಿಗೆ ತರಬೇಕೆಂದು ಆಗ್ರಹಿಸಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಪಾಳ್ಯ ರಘು, ಮತ್ತಷ್ಟು ಸಾಲ ಸಂಘಟನಾ ಕಾರ್ಯದರ್ಶಿ ಲೋಕೇಶ್, ಚಂದ್ರು.ರಾಜ್ಯ ಘಟಕದ ಅಧ್ಯಕ್ಷ ರಮೇಶ, ಹಂಗಾಮಿ ಅಧ್ಯಕ್ಷರಾದ ಶಶಿ ಮುಂತಾದವರು ಹಾಜರಿದ್ದರು.