ಆಸ್ಕರ್ ಫೆರ್ನಾಂಡಿಸ್ ಅವರು ಬಹುಬೇಗನೇ ಗುಣಮುಖರಾಗಿ ಬರಲಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಆಸ್ಕರ್ ಅವರ ಕುಟುಂಬಿಕರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಕೊಂಕಣ್ ರೈಲ್ವೇ, ಹೆದ್ದಾರಿ ಅಭಿವೃದ್ಧಿ ಸೇರಿ ಹಲವು ಅಭಿವೃದ್ಧಿಗೆ ಆಸ್ಕರ್ ಕಾರಣಕರ್ತರು. ಒಂದು ಆದರ್ಶ ಮತ್ತು ವಿಶ್ವಾಸಾರ್ಹ ರಾಜಕಾರಣಿಗಳಲ್ಲಿ ಆಸ್ಕರ್ ಒಬ್ಬರು. ಬಹಳ ಸಾತ್ವಿಕ ಮತ್ತು ಸಜ್ಜನರಾಗಿರೋ ಅವರ ಬಗ್ಗೆ ವ್ಯಕ್ತಿಗತ ಗೌರವವಿದೆ. ಅವರು ಅನಾರೋಗ್ಯಕ್ಕೆ ತುತ್ತಾಗಿರೋದು ಬಹಳ ನೋವು ತಂದಿದೆ. ಅವರು ಬಹುಬೇಗನೇ ಗುಣಮುಖರಾಗಿ ಬರಲಿ, ಮತ್ತೆ ನಮ್ಮ ಜೊತೆ ಹೆಜ್ಜೆ ಇಡಲಿ ಎಂದು ಹೇಳಿದರು.

 

Related Posts

Leave a Reply

Your email address will not be published.