HomeFresh Newsಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ. ಡಿ. ವಿರೇಂದ್ರ ಹೆಗ್ಗಡೆ

ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ. ಡಿ. ವಿರೇಂದ್ರ ಹೆಗ್ಗಡೆ

ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇದೇ ವೇಳೆ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ಪ್ರಸಾದ ಹಾಕಿದರು. ಆಸ್ಕರ್ ರನ್ನ ಕಂಡ ಬಳಿಕ ಕುಟುಂಬಿಕರ ಜೊತೆ ಮಾತನಾಡಿ ಧೈರ್ಯ ತುಂಬಿದರು. ಅಲ್ಲದೆ ಕೆಲ ಕಾಲ ಆಸ್ಪತ್ರೆಯ ವೈದ್ಯರ ಜೊತೆ ಮಾತುಕತೆ ನಡೆಸಿದರು. ಇದೇ ವೇಳೆ ಮಾಧ್ಯಮದವರ ಜೊತೆಗೆ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು, ನಮ್ಮ ರಾಜ್ಯ ಕಂಡ ಶ್ರೇಷ್ಠ ವ್ಯಕ್ತಿ ಆಸ್ಕರ್ ಫರ್ನಾಂಡೀಸ್. ಉಡುಪಿಯಲ್ಲಿ ಹುಟ್ಟಿ ಬೆಳೆದು ರಾಜ್ಯದ ರಾಜಕೀಯದಿಂದ ರಾಷ್ಟ್ರ ಮಟ್ಟಕ್ಕೆ ಹೋದವರು. ಅಲ್ಲಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಗೆ ಆಪ್ತರಾಗಿ ಬಹಳಷ್ಟು ಸೇವೆ ಈ ರಾಜ್ಯಕ್ಕೆ ಮಾಡಿದ್ದಾರೆ. ಅವರಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಪ್ರಸಾದ ಹಾಕಿ ಶುಭ ಹಾರೈಸಿದ್ದೇನೆ. ವೈದ್ಯರ ವರದಿ ಪ್ರಕಾರ ಅವರ ಮೆದುಳು ಚುರುಕಾಗಿದ್ದು, ಕೆಲಸ ಮಾಡ್ತಿದೆ. ಹೀಗಾಗಿ ಪಕ್ಷಾತೀತವಾಗಿ ರಾಜ್ಯದ ಜನತೆ ಅವರ ಆರೋಗ್ಯದ ಬಗ್ಗೆ ಪ್ರಾರ್ಥಿಸ್ತೇವೆ. ಅವರು ಮತ್ತೆ ಆರೋಗ್ಯ ಪಡೆದು ನಮ್ಮ ಜೊತೆ ಸೇವೆ ಮಾಡಲಿ ಎಂದು ಹಾರೈಸಿದರು.

ಈ ವೇಳೆ ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ಎಂ.ಎ ಗಫೂರ್, ಶಶಿಧರ್ ಹೆಗ್ಡೆ ಮತ್ತಿರರರು ಈ ವೇಳೆ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments