ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿ ಪೂಜಾರಿ ಕಣ್ಣೀರು
ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು ಹಾಕಿದ್ದಾರೆ. ಅಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇಂದು ಕಾಂಗ್ರೆಸ್‌ನ ಹಲವು ಮುಖಂಡರು ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಜನಾರ್ದನ ಪೂಜಾರಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ತದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ, ಆಸ್ಕರ್ ಅವರ ಆರೋಗ್ಯ ನೆನೆದು ಪೂಜಾರಿ ಅವರು ಭಾವುಕರಾದರು.ಆಸ್ಕರ್ ಅವರ ಸ್ಥಿತಿ ಗಂಭೀರವಾಗಿರುವ ಮಾಹಿತಿ ತಿಳಿದ ಜನಾರ್ದನ ಪೂಜಾರಿ ಅವರು ತಮ್ಮ ಇಳಿವಯಸ್ಸಿನಲ್ಲಿಯೂ ಆಸ್ಕರ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದರು.