ಆ್ಯಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಕಾರು ಚಾಲಕ ಪೊಲೀಸರ ವಶಕ್ಕೆ

ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಕುಂಪಲದ ಚರಣ್ (31) ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದಾನೆ. ದೇರಳಕಟ್ಟೆಯಿಂದ ಮಂಗಳೂರಿಗೆ ಸೋಮವಾರ ತುರ್ತಾಗಿ ಬರುತ್ತಿದ್ದ ಆ್ಯಂಬ್ಯುಲೆನ್ಸ್ನ ಸುಗಮ ಸಂಚಾರಕ್ಕೆ ಅಡಚಣೆಯಾಗುವಂತೆ ಆರೋಪಿ ಚರಣ್ ತಾನು ಚಲಾಯಿಸುತ್ತಿದ್ದ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿದ್ದ. ಇದನ್ನು ಆಂಬುಲೆನ್ಸ್‌ನಲ್ಲಿದ್ದವರು ವೀಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಟೀಕೆ ಕೇಳಿ ಬಂದಿತ್ತು. ಈ ನಡುವೆ ಇದನ್ನು ಗಮನಿಸಿದ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಅಲ್ಲದೆ ಪೊಲೀಸರು ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದ ಆರೋಪಿ ಚರಣ್ ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ.

 

Related Posts

Leave a Reply

Your email address will not be published.