ಇಂಜಿನಿಯರಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಆರೋಪ : ವಿದ್ಯಾರ್ಥಿಗಳು ಅಮಾನತು

ಮೂಡುಬಿದಿರೆ : ಇಲ್ಲಿನ ತೋಡಾರು ಸಮೀಪದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿ ಗುಂಪುಗಳ ಮಧ್ಯೆ ಗುರುವಾರ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆಆಸ್ಪತ್ರೆಗೆ ದಾಖಲಾದವರು.

ಹೊಡೆದಾಟದಲ್ಲಿ ವಿದ್ಯಾರ್ಥಿಗಳಾದ ಸಹಾಝ್ ಮತ್ತು ಮಹಮ್ಮದ್ ಎಂಬವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದವರು. ಎಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ಶನಿವಾರ ಸಂಪ್ರದಾಯ ದಿನ ಕಾರ್ಯಕ್ರಮ ನಡೆಯಲಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಬುಧವಾರ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ತೃತೀಯ ವರ್ಷದ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದ ವೇಳೆ ಅಂತಿಮ ವರ್ಷದ ವಿದ್ಯಾರ್ಥಿಗಳ ಗುಂಪು ರ್‍ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೊಡೆದಾಟದಲ್ಲಿ ಪಾಲ್ಗೊಂಡಿದ್ದ ಎರಡು ತಂಡಗಳ 8 ಮಂದಿ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಬುಧವಾರದಂದು ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು. ಗುರುವಾರ ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಕಾದಾಟ ನಡೆಸಿದ್ದು, ತೃತೀಯ ವರ್ಷದ ನಾಲ್ಕು ಮಂದಿಯ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳ ನಲ್ವತ್ತು ಮಂದಿಯ ತಂಡ ಹಲ್ಲೆ ನಡೆಸಿದ್ದಾರೆ. ಅವರಲ್ಲಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ನೀಡಿದ ಸೂಚನೆಯಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published.