ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಮಾದಕ ವಸ್ತುಗಳ ನಾಶ
ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್ ಕುಮಾರ್,ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್,ಉಡುಪಿ ಡಿವೈಎಸ್ಪಿ ಸುಧಾಕರ ನಾಯ್ಕ್ ,ಕಾರ್ಕಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್,ವೃತ್ತನಿರೀಕ್ಷಕರಾದ ಮಂಜುನಾಥ್,ಸಂಪತ್,ಮಂಜುನಾಥ ಗೌಡ,ಪ್ರಮೋದ್ ಹಾಗು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.