ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ: ಕಾಂಗ್ರೆಸ್ ಮುಖಂಡರ ಜಂಟಿ ಸುದ್ದಿಗೋಷ್ಟಿ
ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂಬ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ಹೇಳಿಕೆ ಹಾಸ್ಯಸ್ಪದ ಎಂಬುದಾಗಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಹಾಗೂ ಕೆ.ಪಿ.ಸಿ.ಸಿ ಸಂಯೋಜಕ ನವೀನ್ಚಂದ್ರ ಜೆ. ಶೆಟ್ಟಿ ತಿಳಿಸಿದ್ದಾರೆ.
ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಾದ-ವಿವಾದ ವಿರೋಧ-ಪ್ರತಿರೋಧ ಹೇಳಿಕೆಗಳು ಸರ್ವೇ ಸಾಮಾನ್ಯ, ಅದು ಪ್ರಜಪ್ರಭುತ್ವ ವ್ಯವಸ್ಥೆಯ ಹಕ್ಕು ಕೂಡಾ ಆಗಿದೆ ಈ ಮಾತ್ರಕ್ಕೆ ಮುತ್ತಿಗೆ ಹಾಕುತ್ತೇವೆ, ಗೇರವ್ ಮಾಡುತ್ತೇವೆ ಎಂಬ ಬೆದರಿಸುವ ರೀತಿಯ ಹೇಳಿಕೆಗಳಿಗೆ ಕಾಂಗ್ರೆಸ್ ಪಕ್ಷ ಮಣಿಯುವುದಿಲ್ಲ, ಅದಕ್ಕೆ ಪ್ರತಿ ಉತ್ತರ ನೀಡಲು ನಾವು ಸಿದ್ಧರಿದ್ದೇವೆ, ನ್ಯಾಯಯುತ ಹೋರಾಟ ಯಾರೇ ನಡೆಸಿದರೂ ನಮ್ಮ ಸ್ವಾಗತವಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಕಾಂಗ್ರೆಸ್ ಗಣೇಶ್ ಕೋಟ್ಯಾನ್, ಅಬ್ದುಲ್ ರಹೆಮಾನ್, ರಮೀಝ್ ಹುಸೇನ್, ನವೀನ್ ಎನ್. ಶೆಟ್ಟಿ ಹಾಗೂ ಶ್ರೀಧರ್ ಆಚಾರ್ಯ ಉಪಸ್ಥಿತರಿದ್ದರು.