ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: ಕೋವಿಡ್ ಪೀಡಿತ ಗ್ರಾಮಕ್ಕೆ ರೇಷನ್ ಕಿಟ್ ವಿತರಣೆ

ಕಾಪು: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ ಕಿಲಿಂಜೆ ವಾರ್ಡ್‌ನಲ್ಲಿ ಕೊರೊನ ಬಂದು ಸೀಲ್ ಡೌನ್ ಅದ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ರೇಷನ್ ಕಿಟ್ ವಿತರಿಸಲಾಯಿತು. ಜಿಲ್ಲಾದ್ಯಂತ ಈ ವರೆಗೆ 54೦೦ ಕಿಟ್‌ಗಳನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮಾತನಾಡಿ, ಈ ಸಮಯದಲ್ಲಿ ಕೊರೊನ ಪೀಡಿತರಿಗೆ ಫುಡ್ ಕಿಟ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಉದಯ್ ಕೋಟ್ಯಾನ್,ಸದಸ್ಯೆ ಶ್ರೀಮತಿ ಆಶಾ,ಹೆಲ್ಪಿಂಗ್ ಹ್ಯಾಂಡ್ಸ್ ನ ಸಮಾಜ ಸೇವಕರಾದ ಹಬೀಬ್ ಉಡುಪಿ,ಅಜಯ್ ಕುಮಾರ್ ಪೂಜಾರಿ,ನಿತೇಶ್ ಶೆಟ್ಟಿ, ಉಪಸ್ಥಿತರಿದ್ದರು.

ಬಡ ನಿಡಿವೂರು ಗ್ರಾಮ ಪಂಚಾಯತ್ ವಠಾರದಲ್ಲಿ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಜೀವಿನಿ ತಂಡದ ಯೆಶೋದ ಅವರ ಮನವಿ ಮೇರೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಕೊರೊನ ವಾರಿಯರ್ಸ್ ನವರಿಗೆ ರೇಷನ್ ಕಿಟ್ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿ.ಡಿ.ಓ ಶ್ರೀಮತಿ ಮಾಲತಿ,ಉಪಾಧ್ಯಕ್ಷೆರಾದ ತಾರಾ ಪ್ರಭಾಕರ್,ಕಾರ್ಯಕರ್ತೆಯಾದ ವತ್ಸಲಾ ಉಪಸ್ಥಿತರಿದ್ದರು.

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಜಿ ಆರ್.ಎಂ ರಾಘವೇಂದ್ರ ನಾಯಕ್ ಹಾಗೂ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.