ಉದ್ಯಮಿ ಕಜಂಗೆ ಸುದರ್ಶನ್ ಜೈನ್ ನಿಧನ
ಮೂಡುಬಿದರೆ ಎಸ್‌ಜೆಆರ್ ಟಿಂಬರ್ಸ್ ಮಾಲಕ, ರಿಯಲ್ ಎಸ್ಟೇಟ್ ಉದ್ಯಮಿ ಕಜಂಗೆ ಸುದರ್ಶನ್ ಜೈನ್(56) ಅವರು ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮೂಡುಬಿದರೆ ರೋಟರಿ ಮಾಜಿ ಕಾರ್ಯದರ್ಶಿ, ಜೈನ್ ಮಿಲನ್ ಉಪಾಧ್ಯಕ್ಷರಾಗಿ, ಧಾರ್ಮಿಕ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೂಡುಬಿದರೆಯ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸುದರ್ಶನ್ ಅವರಿಗೆ ಸದ್ಗತಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.