ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳು ದೋಷಿ ಎಂದು ತೀರ್ಪು
ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ತೀರ್ಪು ಇಂದು ಪ್ರಕಟಗೊಂಡಿದ್ದು, ಮೂವರು ಪ್ರಮುಖ ಆರೋಪಿಗಳು ದೋಷಿಗಳೆಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.
ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದಾರೆ. ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ರಾಜೇಶ್ವರಿ ಶೆಟ್ಟಿ, ರಾಜೇಶ್ವರಿ ಶೆಟ್ಟಿ ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಆರೋಪಿಗಳಾಗಿದ್ದರು. ಆರೋಪಿಗಳು ದೋಷಿ ಎಂದು ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.ಆರೋಪಿಗಳು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದೆ. ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿಗೆ, ರಾಜೇಶ್ವರಿ ಗೆಳೆಯ ನಿರಂಜನ ಭಟ್ಗೆ ಶಿಕ್ಷೆ ಪ್ರಕಟಗೊಂಡಿದ್ದು, ಐದನೇ ಆರೋಪಿ ಚಾಲಕ ರಾಘವೇಂದ್ರ ಮೇಲಿನ ಪ್ರಕರಣ ಖುಲಾಸೆಗೊಂಡಿದೆ. 4ನೇ ಆರೋಪಿ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು.