ಉಳ್ಳಾಲ ದರ್ಗಾದಲ್ಲಿ 21ನೇ ಉರೂಸ್
ದಕ್ಷಿಣ ಭಾರತದ ಅಜ್ಮಿರ್ ಎಂದೇ ಪ್ರಸಿದ್ಧಗೊಂಡ ಇತಿಹಾಸ ಪ್ರಸಿದ್ಧ ಉಳ್ಳಾಲದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಖುತುಬುಝಮಾನ್ ಸಯ್ಯದ್ ಶರೀಫುಲ್ ಮದನಿ ರವರ ಹೆಸರಲ್ಲಿ 21ನೇ ಉರೂಸ್ ಸಮಾರಂಭ ಡಿಸೆಂಬರ್ 23 ರಂದು ನಡೆಯಲಿದ್ದು, ಇದರ ಪ್ರಚಾರ ಸಮಾರಂಭ ಉದ್ಘಾಟನೆ ನಡೆಯಿತು.
ಈ ಸಂದರ್ಭದಲ್ಲಿ ಜನತಾದಳ ರಾಷ್ಟ್ರೀಯ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಬಿ. ಎಂ ಫಾರೂಕ್ ರವರು ಹಾಗೂ ಶಾಸಕರಾದ ಯು. ಟಿ ಖಾದರ್ ರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು, ಈ ಸಂಧರ್ಭದಲ್ಲಿ ಹಲವಾರು ಉಲಮಾಗಳು ಉಪಸ್ಥಿತರಿದ್ದರು.