ಎರ್ಮಾಳು ಸರ್ಕಾರಿ ಶಾಲೆಯಲ್ಲಿ ಪ್ರಾರಂಭೋತ್ಸವ ಸಂಭ್ರಮ
ತೆಂಕ ಎರ್ಮಾಳು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ವಿವಿಧ ಕ್ಷೇತ್ರದ ಗಣ್ಯರ ಸಮಕ್ಷಮದಲ್ಲಿ ಕರೋನಾ ಬಳಿಕದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಡೆಸಿದ್ದಾರೆ.
ಈ ಅದ್ಧೂರಿಯ ಕಾರ್ಯಕ್ರಮ ದ ಮುಂದಾಳತ್ವವನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ವಹಿಸಿಕೊಂಡಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಕರೋನಾ ಭೀತಿಯಿಂದ ಸುಮಾರು ಒಂದುವರೆ ವರ್ಷಗಳ ಕಾಲ ಮಕ್ಕಳು ಶಾಲೆಯಿಂದ ದೂರವಿದ್ದು, ವಿದ್ಯಾಭ್ಯಾಸ ವಂಚಿತರಾಗಿದ್ದಾರೆ. ಆನ್ ಲೈನ್ ನಲ್ಲಿ ತರಗತಿ ನಡೆಯುತ್ತಿದ್ದರೂ ಬಹಳಷ್ಟು ವಿದ್ಯಾರ್ಥಿಗಳು ನಾನಾ ಕಾರಣಗಳಿಂದ ಅದರ ಪ್ರಯೋಜನಗಳನ್ನು ಪಡೆಯಲು ವಿಫಲರಾಗಿದ್ದಾರೆ. ಇದೀಗ ಕರೋನದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿ ಮತ್ತೆ ಪುಟಾಣಿಗಳು ಶಾಲೆಗೆ ಮರಳುವ ಈ ಕಾಲಘಟ್ಟದಲ್ಲಿ ಶಾಲೆಗಳಲ್ಲಿ ಮಕ್ಕಳ ಕಲರವ ಆರಂಭಗೊಳ್ಳುವಂತ್ತಾಗಿದ್ದು ಸಂತಸ ತಂದಿದೆ. ಈ ಸಂಭ್ರಮ ಶುಭ ಸಂದರ್ಭದಲ್ಲಿ ಮಕ್ಕಳಿಗೆ ಶಾಲೆಯ ಬಗ್ಗೆ ಒಲವು ಮೂಡಿಸುವ ನಿಟ್ಟಿನಲ್ಲಿ ಶಾಲೆಯನ್ನು ಅಲಂಕರಿಸಿ ವಾದ್ಯ ಮೇಳಗಳೊಂದಿಗೆ ಮಕ್ಕಳನ್ನು ಶಾಲಾ ಕೊಠಡಿಗೆ ಕರೆತರುವ ಹಾಗೂ ಹೂ ಮತ್ತು ಬಲೂನು ನೀಡಿ ಸ್ವಾಗತಿಸುವ ಮೂಲಕ ಮಕ್ಕಳನ್ನು ಸಂತೋಷ ಪಡಿಸುವ ಕಾರ್ಯ ನಡೆದಿದೆ ಎಂದರು.
ಈ ಸಂದರ್ಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಂಕ ಗ್ರಾ.ಪಂ. ಅಧ್ಯಕ್ಷೆ ಕಸ್ತೂರಿ ಪ್ರವೀಣ್ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಶಿಕ್ಷಣ ಸಯೋಜಕ ಶಂಕರ್ ಸುವರ್ಣ, ಗ್ರಾ.ಪಂ. ಉಪಾಧ್ಯಕ್ಷೆ ಜಯಶ್ರೀ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಗೋಪಾಲ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಯ್ಯ, ಶಾಲಾ ಮುಖ್ಯ ಶಿಕ್ಷಕಿ ವಿನೋದ, ಸಹ ಶಿಕ್ಷಕಿ ಮಲ್ಲಿಕ ಉಪಸ್ಥಿತರಿದ್ದರು.