ಎಸ್ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ
ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್ 10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ, ಯುವ ನಾಯಕ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತಹ ಸಮಸ್ಯೆ ಪರಿಹಾರವೇ ನನ್ನ ಗುರಿ ಎಂದು ಹೇಳಿದರು.