ಏರ್ ಪೋರ್ಟ್ ಸುತ್ತಮುತ್ತ ಡ್ರೋನ್ ಹಾರಾಟಕ್ಕೆ ಅವಕಾಶವಿಲ್ಲ
ದೇಶದಲ್ಲಿ ಉಗ್ರರ ವಿಧ್ವಂಸಕ ಕೃತ್ಯ ಸಾಧ್ಯತೆ ಬೆನ್ನಲ್ಲೇ ಮಂಗಳೂರು ಏರ್ ಪೋರ್ಟ್ ಸುತ್ತಮುತ್ತ ಅಲರ್ಟ್ ಮಾಡಲಾಗಿದೆ. ಏರ್‍ಪೋರ್ಟ್ ಭದ್ರತೆಯ ಸಿಐಎಸ್‍ಎಫ್ ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಅಧಿಕಾರಿಗಳು ಸ್ಥಳೀಯರಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಮಾತನಾಡಿ, ಅಂತಾರಾಷ್ಟ್ರೀಯ ಏರ್‍ಪೋರ್ಟ್‍ನಲ್ಲಿ ಡ್ರೋನ್‍ಗಳು ಯಾವುದೇ ರೀತಿಯಲ್ಲಿ ಹಾರಾಟ ಮಾಡುತ್ತಿಲ್ಲ. ಇನ್ನು ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ, ತಪಾಸಣೆ ಮಾಡಲಾಗುವುದು ಎಂದು ಅವರು ಹೇಳಿದ್ರು.