ಕಟೀಲ್ ಆಡಿಯೋ ವಿವಾದ: ಪಕ್ಷ ಸಂಘಟನೆ ಸಹಿಸಲಾಗದೆ ಆಡಿಯೋ ಕ್ರಿಯೇಟ್: ಹರಿಕೃಷ್ಣ ಬಂಟ್ವಾಳ್

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಅನ್ನುವ ಆಡಿಯೋಗು ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹೇಳಿದರು.

ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಸಚಿವರಾದ ಈಶ್ವರಪ್ಪನವರು ಹೇಳಿಕೆಯನ್ನು ನೀಡಿದ್ದಾರೆ. ಆ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದಲ್ಲ, ಯಾರೋ ಬೇಕಂತಲೇ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಕಟೀಲ್‌ರವರು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದನ್ನು ಸಹಿಸದೆ ಯಾರೋ ಈ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರುಗಳು ಹಾಗೂ ಕಾರ್ಯಕರ್ತರು ದೂರು ನೀಡಿದ್ದಾರೆ. ಸತ್ಯಾಸತ್ಯತೆ ಆದಷ್ಟು ಬೇಗನೆ ತಿಳಿಯುತ್ತದೆ ಎಂದು ಹೇಳಿದರು.

 

Related Posts

Leave a Reply

Your email address will not be published.