ಕಡಬ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ಅವಘಡ

ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಎಡಮಂಗಳ ಸಮೀಪ  ಸಂಭವಿಸಿದೆ.


ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ ಚಲಿಸಿದ ವೇಳೆ ಸಮಸ್ಯೆಯು ಚಾಲಕನ ಗಮನಕ್ಕೆ ಬಂದಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು ನಿಯಂತ್ರಿಸಿ, ನಿಲುಗಡೆ ಮಾಡಿ. ಘಟನೆಯನ್ನು ಇಲಾಖೆ ಗಮನಕ್ಕೆ ತಂದಿದ್ದಾರೆ. ಬಳಿಕ ಕಾರ್ಯಚರಣೆ ನಡೆಸಿ ಹಳಿ ದುರಸ್ತಿ ನಡೆಸಲಾಯಿತು. ಬಳಿಕ ರೈಲು ಸಂಚರಿಸಲು ಅವಕಾಶ ನೀಡಲಾಯಿತು.
ಬಿರುಕು ಬಿಟ್ಟ ಹಳಿಯಲ್ಲಿ ರೈಲು ಸಂಚರಿಸುತ್ತಿದ್ದಲ್ಲಿ ಬಾರೀ ಅವಘಡ ಸಂಭವಿಸಿ ಪ್ರಾಣ ಹಾನಿ ಉಂಟಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ. ಚಾಲಕನ ಸಮಯ. ಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Related Posts

Leave a Reply

Your email address will not be published.