ಕಡಬ ತಾಲೂಕು ಯುವಜನ ಒಕ್ಕೂಟದ ಪದಗ್ರಹಣ

ಕಡಬ: ನಮ್ಮದು ಅತೀ ಹೆಚ್ಚು ಸಂಖ್ಯೆಯಲ್ಲಿ ಯುವಜನರನ್ನು ಹೊಂದಿರುವ ದೇಶ. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಪ್ರಮುಖವಾದುದು. ಆದುದರಿಂದ ಯುವಜನರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ಸಂಘಟನಾತ್ಮಕವಾಗಿ ಬಲಗೊಳ್ಳಬೇಕು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ನುಡಿದರು.

ಅವರು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿದ ಕಡಬ ತಾಲೂಕು ಯುವಜನ ಒಕ್ಕೂಟದ ಪದಾದಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿಯುವಕ-ಯುವತಿ ಮಂಡಲಗಳ ನೋಂದಣಿ ಪತ್ರಗಳನ್ನು ವಿತರಣೆಗೈದು ಮಾತನಾಡಿದರು. ಹೊಸದಾಗಿ ರೂಪುಗೊಂಡ ಕಡಬ ತಾಲೂಕಿನಲ್ಲಿ ಸರಕಾರದ ವಿವಿಧ ಇಲಾಖೆಗಳ ತಾಲೂಕುಮಟ್ಟದ ಕಚೇರಿಗಳು ಆರಂಭಗೊಳ್ಳುವುದರೊoದಿಗೆ ತಾಲೂಕು ಮಟ್ಟದ ಸಂಘಟನೆಗಳ ರಚನೆಯೂ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಂಗಳೂರಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ|ಎಸ್.ಬಾಲಾಜಿ ಅವರು ಇಡೀ ರಾಜ್ಯಕ್ಕೆ ಹೋಲಿಸಿದರೆ ದ.ಕ.ಜಿಲ್ಲೆಯಲ್ಲಿ ಯುವ ಸಂಘಟನೆಗಳು ಅತ್ಯಂತ ಸಕ್ರಿಯವಾಗಿದೆ. ಯುವ ಸಂಘಟನೆಗಳಲ್ಲಿ ಯುವಕರು ಹಾಗೂ ಯುವತಿಯರು ತೊಡಗಿಸಿಕೊಂಡಲ್ಲಿ ತಮ್ಮ ನಾಯಕತ್ವ ಗುಣವನ್ನು ಸಮಾಜಕ್ಕೆ ತೋರ್ಪಡಿಸುವ ಮೂಲಕ ಭವಿಷ್ಯದ ನಾಯಕರಾಗಿ ರೂಪುಗೊಳ್ಳಲು ವಿಪುಲ ಅವಕಾಶಗಳಿವೆ ಎಂದರು.

ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಶಿವಪ್ರಸಾದ್ ರೈ ಮೈಲೇರಿ ಎಲ್ಲರ ಸಹಕಾರ ಕೋರಿದರು.

ದ.ಕ.ಜಿಲ್ಲಾ ಯುವ ಸಮನ್ವಯಾದಿ ಕಾರಿ ರಘುವೀರ್ ,  ಜಿ.ಪಂ. ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್, ದ.ಕ.ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡೆಂಜಿ, ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸೀತಾರಾಮ ಗೌಡ ಪೆÇಸವಳಿಕೆ, ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾದಿಕಾರಿ ಮೇದಪ್ಪ ನಾವೂರು, ಕಡಬ ತಾಲೂಕು ಯುವಜನ ಒಕ್ಕೂಟದ ಗೌರವಾಧ್ಯಕ್ಷ ಯಶೋಧರ ಜೈನ್ ಮೊದಲಾದವರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.