ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆಕಂದಾಯ ಅಧಿಕಾರಿ ಪ್ರವೀಣ್ ಕರ್ಕೇರ, ಕಂದಾಯ ನಿರೀಕ್ಷಕರು ಹಾಗೂ ತೆರಿಗೆ ವಸೂಲಿಗಾರರು ,ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ರು.