ಕನ್ನಡ ಸಿನಿಮಾ ನಟ ಸತ್ಯಜಿತ್ ನಿಧನ

ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಚಂದನವನದ ಹಲವಾರು ಸ್ಟಾರ್​ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು.

ಸತ್ಯಜಿತ್ ಅವರ​ ಆರೋಗ್ಯ ಪರಿಸ್ಥಿತಿ ಗಂಭೀರವಾಗಿ ಕಳೆದ ಸೋಮವಾರ ಬೌರಿಂಗ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ಆಸ್ಪತ್ರೆಗೆ ಸತ್ಯಜಿತ್ ದಾಖಲಿಸಿದ ದಿನ ಮಾಧ್ಯಮದವರ ಜತೆ ಮಾತನಾಡಿದ್ದ​ ಪುತ್ರ ಆಕಾಶ್, ತಂದೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದರು.

ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಬಳಿಕ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಾಲಿನಲ್ಲಿ ಗ್ಯಾಂಗ್ರಿನ್​ ಕಾಣಿಸಿಕೊಂಡ ಬಳಿಕ ಸಿನಿಮಾ ರಂಗದಿಂದ ಅವರಿಗೆ ಬೇಡಿಕೆ ಕಡಿಮೆ ಆಯಿತು. ಬಳಿಕ ಕುಟುಂಬದ ಹಣಕಾಸಿನ ಸ್ಥಿತಿಯು ಉತ್ತಮವಾಗಿರಲಿಲ್ಲ. ಅದಲ್ಲದೆ ಮಗಳ ಮೇಲೆಯೂ ಸತ್ಯಜಿತ್​ ಅಸಮಾಧಾನವಾಗಿತ್ತು. ಕುಟುಂಬ ಮತ್ತು ಆರೋಗ್ಯ ಸಮಸ್ಯೆಗಳಿಂದ ಸತ್ಯಜಿತ್​ ತುಂಬಾ ಕೊರಗಿ ಹೋಗಿದ್ದರು.2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ಅಭಿನಯದ ಸೆಕೆಂಡ್​ ಹಾಫ್​ ಚಿತ್ರದ ಸತ್ಯಜಿತ್‌ ಅಭಿನಯಿಸಿದ್ದರು. ಇದೇ ಸತ್ಯಜಿತ್ ಅಭಿನಯಿಸಿದ ಕೊನೆಯ ಚಿತ್ರ.

 

Related Posts

Leave a Reply

Your email address will not be published.