ಕರಾವಳಿಯಾದ್ಯಂತ ಬಕ್ರೀದ್ ಹಬ್ಬ ಸಂಭ್ರಮ
ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ದಕ್ಷಿಣ ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯಂತೆ ದ.ಕ. ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸಲಾಗುತ್ತಿದೆ. ಇಂದು ಬೆಳಿಗ್ಗೆ 6:30ಕ್ಕೆ ಕೆಲವು ಮಸೀದಿಗಳಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಆರಂಭಗೊಂಡಿದೆ. ಕಳೆದ ಬಾರಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಕೆಲವೊಂದು ನಿರ್ಬಂಧ ಹೇರಿದ್ದರಿಂದ ಹಬ್ಬದ ಸಂಭ್ರಮವಿರಲಿಲ್ಲ. ಆದರೆ ಈ ಬಾರಿ ಹೊಸ ಮಾರ್ಗಸೂಚಿಯನ್ನು ಪಾಲಿಸುವುದರೊಂದಿಗೆ ತುಸು ಸಂಭ್ರಮ ಕಂಡು ಬಂತು.
ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ.50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಝ್, ಈದ್ ಖುತ್ಬಾ ನೆರವೇರಿಸಬೇಕು ಎಂದು ರಾಜ್ಯ ಸರಕಾರ ಸೂಚಿಸಿದ ಮೇರೆಗೆ ಎಲ್ಲಾ ಮಸೀದಿಗಳಲ್ಲಿ ಅದನ್ನು ಪಾಲಿಸಲಾಯಿತು ಅದರಂತೆ ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಸರಳ ರೀತಿಯ ಪ್ರಾರ್ಥನೆಯನ್ನ ಸಲ್ಲಿಸಲಾಯಿತು. ಸರಕಾರದ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಝ್ ನೆರವೇರಿಸಲಾಯಿತು. ಇನ್ನೂ ಮಾಸ್ಕ್ ಧಾರಣೆ ಕಡ್ಡಾಯ, 65 ವರ್ಷ ಪ್ರಾಯ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮೂಹಿಕ ನಮಾಝ್ ನಲ್ಲಿ ಭಾಗವಹಿಸುವಂತಿಲ್ಲ ಸೇರಿದಂತೆ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು.