ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಎಎಚ್‌ಪಿಐನಿಂದ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿ

ಮಣಿಪಾಲ: ಎಎಚ್‌ಪಿಐ -ಅಸೋಸಿಯೇಷನ್ ​​ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ (ಭಾರತ) ದಿಂದ ಆರೋಗ್ಯದ ಶ್ರೇಷ್ಠತೆಗಾಗಿ ಕೊಡಲ್ಪಡುವ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ, ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಶ್ರೀಮತಿ ಶುಭ ಸೂರಿಯ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು.

ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಸಿ ಜಿ ಮುತ್ತಣ, ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಮತ್ತು ಗುಣಮಟ್ಟ ಅನುಷ್ಠಾನದ ಸಲಹೆಗಾರರಾದ ಡಾ. ಸುನೀಲ್ ಸಿ ಮುಂಡ್ಕೂರ್ ಉಪಸ್ಥಿತರಿದ್ದರು. ಅಸೋಸಿಯೇಷನ್ ​​ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ (ಇಂಡಿಯಾ) ಎಎಚ್‌ಪಿಐ ಭಾರತದಲ್ಲಿ ಹೆಲ್ತ್‌ಕೇರ್ ಸಂಸ್ಥೆಗಳ ಪ್ರತಿನಿಧಿ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ ಮತ್ತು ಪ್ರತಿ ವರ್ಷ ಆರೋಗ್ಯ ಕ್ಷೆತ್ರದಲ್ಲಿ ಸಂಸ್ಥೆಗಳು ಸಾಧಿಸಿದ ಶ್ರೇಷ್ಠತೆಯನ್ನು ಗುರುತಿಸುತ್ತದೆ ಮತ್ತು ಪ್ರಶಸ್ತಿ ನೀಡಿ ಗೌರವಿಸುತ್ತದೆ. ರೋಗಿಗಳ ಆರೈಕೆ, ರೋಗಿಯ ಶಿಕ್ಷಣ ಮತ್ತು ಅರಿವು, ಶುಶ್ರೂಷಾ, ಸಂಪನ್ಮೂಲ ನಿರ್ವಹಣೆ, ಶುಶ್ರೂಷಾ ಆರೈಕೆ ಗುಣಮಟ್ಟ, ಸಂವಹನ ಮತ್ತು ಮಾರ್ಗದರ್ಶನ, ಮತ್ತು ಸೋಂಕು ನಿಯಂತ್ರಣ ಅಭ್ಯಾಸಗಳಂತಹ ಶುಶ್ರೂಷಾ ಆರೈಕೆಯ ಎಲ್ಲಾ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು ಕಾಯ್ದುಕೊಳ್ಳುವ ಆಸ್ಪತ್ರೆಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

Related Posts

Leave a Reply

Your email address will not be published.