ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ: ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಗ ಅದನ್ನೆಲ್ಲ ಚರ್ಚೆ ಮಾಡುವ ಅಗತ್ಯ ಇಲ್ಲ. ಇದೆಲ್ಲ ಪಕ್ಷದ ಒಳಗೆ ತಿರ್ಮಾನಿಸುವ ವಿಚಾರ. ಈಗ ನಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮಾತನಾಡಿದ ಡಿಕೆಶಿ ಅವರು, ನಮ್ಮ ರಾಜ್ಯಕ್ಕೆ ಹೆಚ್ಚಿನ ಅವಕಾಶಗಳು ಸಿಗಲಿ. ಹೊಸದಾಗಿ ಆಯ್ಕೆಯಾಗುವವರು ರಾಜ್ಯದ ಧ್ವನಿಯಾಗಲಿ.
ನಮ್ಮ 25 ಸಂಸದರು ಬಾಯಿಮುಚ್ಚಿಕೊಂಡು ಇದ್ದಾರೆ. ಸಂಸದರು ನಮ್ಮ ರಾಜ್ಯದ ಬಗ್ಗೆ ಬಾಯಿಯ ಬಿಚ್ಚುವುದಿಲ್ಲ. ವ್ಯಾಕ್ಸಿನ್ ಹಂಚಿಕೆಯಲ್ಲಿ ಬಹಳ ತಾರತಮ್ಯ ಆಗುತ್ತಿದೆ. ಗುಜರಾತ್ ಮತ್ತು ಕರ್ನಾಟಕದ ವ್ಯಾಕ್ಸಿನ್ ಹಂಚಿಕೆಯ ತುಲನೆಯಾಗಲಿ. ರಾಜ್ಯದ ಎಂಪಿಗಳು ಇನ್ನಾದರೂ ಮಾತನಾಡಲಿ. ಗುಜರಾತಿಗೆ ಅತಿಹೆಚ್ಚು ವ್ಯಾಕ್ಸಿನ್ ಕಳುಹಿಸಿಕೊಡಲಾಗುತ್ತಿದೆ. ಕರ್ನಾಟಕದಲ್ಲಿ ವ್ಯಾಕ್ಸಿನ್ ಸಿಗದೇ ಜನ ಹೊಡೆದಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Related Posts

Leave a Reply

Your email address will not be published.