ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ : ಜಗದೀಶ್ ಶೇಣವ
ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಜಗದೀಶ್ ಶೇಣವ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975ರಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಪ್ರಜಾಪ್ರಭುತ್ವದ ಹತ್ಯೆ ಮಾಡಿತ್ತು. ಈ ಸಂದರ್ಭ ಮಾನವ ಹಕ್ಕುಗಳನ್ನು ಹತ್ತಿಕ್ಕಲಾಯಿತು ಮತ್ತು ಜನರ ಚಿತ್ರಹಿಂಸೆ ಅನುಭವಿಸಬೇಕಾಗಿದೆ. ಇದೇ ಕಾರಣಕ್ಕೆ ಜೂನ್ 25ರಂದು ಭಾರತದ ಇತಿಹಾಸದಲ್ಲಿ ಕಪ್ಪು ದಿನವೆಂದು ಪರಿಗಣಿಸಲಾಗುತ್ತಿದೆ. ಈ ಕಾರಣಕ್ಕಾಗಿ ಬಿಜೆಪಿ ವತಿಯಿಂದ ವೆಬಕ್ಸ್ ಮೂಲಕ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಜುಲೈ 26ರಂದು ನಡೆಯುವ ವಿಚಾರ ಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹನಾಯಕ್ ಮಾತನಾಡಲಿದ್ದಾರೆ ಎಂದು ಅವ್ರು ಹೇಳಿದ್ರು.
ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವೂ ದೇಶಾದ್ಯಂತ ಅತ್ಯಂತ ಜನಪ್ರಿಯತೆ ಪಡೆದಿದೆ ಎಂದು ಅವರು ಹೇಳಿದ್ರು. ಇನ್ನು ಕಾಂಗ್ರೆಸ್ ಲಸಿಕೆ ವಿಚಾರದಲ್ಲಿ ರಾಜಕಾರಣ ಮೂಲಕ ಜನತೆಯಲ್ಲಿ ಅಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದ್ರು. ಇನ್ನು ಈಗಾಗಲೇ 30ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ . ಸರ್ಕಾರ ಮುತುವರ್ಜಿ ವಹಿಸಿಕೊಂಡು ಈ ಕಾರ್ಯಕ್ರಮವನ್ನು ನಡೆಸಿದೆ, ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಮನೆ ಮನೆ ತೆರಳಿ, ಲಸಿಕೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ರು. ಈ ವೇಳೆ ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರು, ರಾಧಾಕೃಷ್ಣ ಸೇರಿದಂತೆ ಮತ್ತಿತರರರು ಉಪಸ್ಥಿತಿರಿದ್ದರು.