ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು ಖಂಡಿಸುತ್ತಿದ್ದು, ಕಾಶ್ಮೀರಿ ಪಂಡಿತರೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡುವುದಕ್ಕೆ ಈ ಪ್ರತಿಭಟನೆ ನಡೆಯುತ್ತಿದೆ ಎಂದು ಹೇಳಿದರು.

ವಿಹಿಪಂ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಮಾತನಾಡಿ, ಭರತಭೂಮಿಯ ಭೂಸ್ವರ್ಗ ಎನಿಸಿರುವ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲಾಗುತ್ತಿರುವ ದೌರ್ಜನ್ಯವನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಜರಂಗಳದ ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್., ವಿಹಿಂಪ ಸಹಸಂಚಾಲಕ ಭರತ್ ಕುಮ್ಡೇಲು,ವಿಹಿಂಪ ಪ್ರಖಂಡದ ವಿಶಾಖ್ ರೈ, ವಿಹಿಂಪ ಪ್ರಖಂಡ ಅಧ್ಯಕ್ಷ ಹರೀಶ್ ಕುಮಾರ್ ದೋಳ್ಪಾಡಿ ಮತ್ತಿತರರು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.