ಕುಳಾಯಿ ಸರ ಕಳ್ಳತನ ಪ್ರಕರಣ : ಆರೋಪಿಯ ಬಂಧನ

ಸುರತ್ಕಲ್‌ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ ಮಹಿಳೆಯ ಅಳಿಯನೇ ಈ ಕೃತ್ಯ ಎಸಗಿದ್ದಾನೆ ಎನ್ನುವುದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದರು.

Related Posts

Leave a Reply

Your email address will not be published.