ಕೃಷ್ಣಾಪುರ 4ನೇ ಬ್ಲಾಕ್- ಕೈಕಂಬ ಸಂಪರ್ಕಿಸುವ ರಸ್ತೆ ಕಾಂಕ್ರೀಟಿಕರಣ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ

ಕರ್ನಾಟಕ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 4 ನೇ ಬ್ಲಾಕಿನ ಕೈಕಂಬವನ್ನು ಸಂಪರ್ಕಿಸುವ ರಸ್ತೆಯನ್ನು 20 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರೀಟಿಕರಣ ಮಾಡುವ ಯೋಜನೆಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದರು.

ಈ ಭಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ ಸ್ಥಳೀಯರು ಶಾಸಕರಿಗೆ ಮನವಿ ಅರ್ಪಿಸಿದರು.ಕಾರ್ಯಕ್ರಮದಲ್ಲಿ ಭಾಜಪಾ ಉತ್ತರ ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಸ್ಥಳೀಯ ಕಾರ್ಪೋರೇಟರ್ ಲಕ್ಷ್ಮಿ ಶೇಖರ್ ದೇವಾಡಿಗ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ ಬೊಳ್ಳಾಜೆ, ಯುವ ಮೋರ್ಚಾ ಅಧ್ಯಕ್ಷ ಭರತರಾಜ್ ಕೃಷ್ಣಾಪುರ, ಪ್ರಮುಖರಾದ ಸದಾಶಿವ ಐತಾಳ್, ಶೇಖರ್ ದೇವಾಡಿಗ, ಲಕ್ಷ್ಮೀಶ್ ಸಹಿತ ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.