ಕೇಂದ್ರ ಸಂಪುಟದಲ್ಲಿ ಸಹಕಾರಿ ಸಚಿವಾಲಯ ಸ್ಥಾಪನೆ ಸ್ವಾಗತಾರ್ಹ: ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ

ಕೇಂದ್ರ ಸಂಪುಟದಲ್ಲಿ ಪ್ರಥಮ ಬಾರಿ ಸಹಕಾರಿ ಸಚಿವಾಲಯ ಸ್ಥಾಪಿಸಿದ್ದು, ಸಹಕಾರಿ ಕ್ಷೇತ್ರದ ಬೆಳವಣಿಗೆ ದೃಷ್ಟಿಯಿಂದ ಸ್ವಾಗತಾರ್ಹ ಮತ್ತು ಅಭಿನಂದನೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆಯವರು ಹೇಳಿದರು.ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, 97ನೇ ಸಂವಿಧಾನಿಕ ತಿದ್ದುಪಡಿಯಂತೆ ರಾಜ್ಯಗಳ ಸಹಕಾರಿ ಕಾಯ್ದೆಯಲ್ಲಿ ಪುನರಪಿ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆವಿದೆಯೆಂದು ಕೊಡವೂರು ರವಿರಾಜ ಹೆಗ್ಡೆಯವರು ತಿಳಿಸಿದ್ದಾರೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಸಂಸದರಾದ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿ ಮಂಡಲಕ್ಕೆ ಸ್ಥಾನ ಪಡೆದಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Related Posts

Leave a Reply

Your email address will not be published.