ಕೇಂದ್ರ ಸಚಿವ ಡಿವಿಎಸ್ ಭೇಟಿಯಾದ ಸಚಿವ ಕೋಟ: ಲಸಿಕೆ ಕುರಿತು ಚರ್ಚೆ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಕುರಿತು ಚರ್ಚೆ ನಡೆಸಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಇಂದು ಭೇಟಿಯಾಗಿ ಅವಳಿ ಜಿಲ್ಲೆಗಳಿಗೆ ಲಸಿಕೆ ಸರಬರಾಜು ಹೆಚ್ಚಳಕ್ಕೆ ಮನವಿ ಸಲ್ಲಿಸಿದರು. ಸಚಿವರ ಮನವಿಯ ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಸಿಕೆ ಜವಾಬ್ದಾರಿ ಹೊಂದಿರುವ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರಿಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ೨೫ ಸಾವಿರದಂತೆ ಲಸಿಕೆ ಬಿಡುಗಡೆ ಮಾಡಲು ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡರು ಸೂಚಿಸಿದ್ದಾರೆ.