ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಶೋಭಾ ಕರಂದ್ಲಾಜೆ ಸೇರಿದಂತೆ 43 ಮಂದಿ ನೂತನ ಸಚಿವರಾಗಿ ಪ್ರಮಾಣವಚನ
ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ಪುನರ್ ರಚನೆಯಾಗುತ್ತಿದೆ. 43 ಮಂದಿ ಕೇಂದ್ರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಜೆಪಿಯ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ, ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ , ಒಡಿಶಾದ ಅಶ್ವಿನಿ ವೈಷ್ಣವ್, ಕರ್ನಾಟಕದ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ಕಿರಣ್ ರಿಜಿಜು, ಅನುರಾಗ್ ಠಾಕೂರ್, ಕಿಶನ್ ರೆಡ್ಡಿ ಹಾಗೂ ಆರ್.ಕೆ. ಸಿಂಗ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೊಸ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಒಟ್ಟು 43 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.