ಕೇರಳದಲ್ಲಿ ನಿಫಾ ವೈರಸ್ ಹಾವಳಿ – ರಾಜ್ಯದಲ್ಲೂ ಬಿಗಿ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ
ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು.
ನಿಫಾ ವೈರಸ್ ಬಗ್ಗೆ ನಿಗಾ ವಹಿಸಲಾಗಿದೆ. ಈ ವೈರಸ್ ಸೋಂಕು ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವಂತೆ ತಜ್ಞರಿಗೆ ಸೂಚಿಸಿದ್ದೇನೆ. ಇದರ ಲಕ್ಷಣಗಳು, ಅದು ಯಾವ ರೀತಿ ಹರಡುತ್ತದೆ, ನಿಯಂತ್ರಣ ಕ್ರಮ ಹೇಗೆ ಎಂಬುದರ ಬಗ್ಗೆ ಸಲಹೆ ನೀಡುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.