ಕೋವಿಡ್ ಸಂಕಷ್ಟದಲ್ಲಿ ಕಾಂಗ್ರೆಸ್ ರಾಜಕಾರಣ: ಸುಧೀರ್ ಶೆಟ್ಟಿ ಕಣ್ಣೂರ್ ಅರೋಪ

ಮಂಗಳೂರು: ಕೋವಿಡ್‌ನ ಈ ಸಂಕಷ್ಠದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಪಿಎಚ್‌ಒ ಎದುರು ಪ್ರತಿಭಟನೆ ಹಾಗೂ ಜನರಿಗೆ ತಪ್ಪು ಮಾಹಿತಿ ನೀಡಿ ಗೊಂದಲ ನಿರ್ಮಾಣ ಮಾಡುವುದನ್ನು ಬಿಟ್ಟು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೋವಿಡ್ ಮಹಾಮಾರಿಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಬೇಕೆಂದು ಮಂಗಳೂರು ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಹೇಳಿದರು.


ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೊರೊನಾ ಸಂಕಷ್ಟದ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಬಿಜೆಪಿ ಶಾಸಕರು, ಸಚಿವರು, ಸಂಸದರು ಕೊರೊನಾ ಮಹಾಮಾರಿಯ ಕಾಲಘಟ್ಟದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚುವರಿ ವೆಂಟಿಲೇಟರ್ ಅಳವಡಿಸುವ ಕೆಲಸ, ಆಕ್ಸಿಜನ್ ಜನರೇಟರ್ ಘಟಕ, ಆಕ್ಸಿಜನ್ ಶೇಖರಣಾ ಟ್ಯಾಂಕ್ ಎಲ್ಲಾ ಮೆಡಿಕಲ್ ಆಸ್ಪತ್ರೆಯ ವೈದ್ಯರನ್ನು ವೈದ್ಯರ ನಡೆ ಹಳ್ಳಿಯ ಕಡೆ ಎಂಬಂತಹ ಕಾರ್ಯಕ್ರಮದ ಮುಖಾಂತರ ಸಾಕಷ್ಟು ಸೇವಾ ಕಾರ್ಯಗಳನ್ನು ಮಾಡಿದ್ದನ್ನು ನಾವೆಲ್ಲಾ ನೋಡಿದ್ದೇವೆ. ಅದಲ್ಲದೆ ಮಂಗಳೂರು ಪಾಲಿಕೆಯ 60 ವಾರ್ಡಿನಲ್ಲೂ ಶಾಸಕರ ನೇತೃತ್ವದಲ್ಲಿ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್ ರಚಿಸಿ ಕೆಲಸ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಇನ್ನು ಕಾಂಗ್ರೆಸ್ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಲಸಿಕೆಯ ಕುರಿತು ಗೊಂದಲದ ಹೇಳಿಕೆಯನ್ನು ನೀಡುವುದು ಸರಿಯಲ್ಲ. ಲಸಿಕೆ ಕುರಿತು ಗೊಂದಲ ನಿರ್ಮಾಣ ಮಾಡಿ ಪ್ರತಿಭಟನೆ ಮಾಡುವುದನ್ನು ಬಿಜೆಪಿ ಖಂಡಿಸುತ್ತಿದೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಣ್‌ದೀಪ್ ಕಾಂಚನ್, ರೂಪಾ ಡಿ. ಬಂಗೇರಾ, ವಿಜಯಕುಮಾರ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.