ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ
ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು.
ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ ಪ್ರವಾಸಿಗರು ಹಾಗೂ ಜಿಲ್ಲೆಯ ಜನತೆ ದೊಡ್ಡ ಸಂಖ್ಯೆಯಲ್ಲಿ ಕ್ಷೇತ್ರದತ್ತ ಮುಖ ಮಾಡುತ್ತಿದ್ದಾರೆ.
ಶ್ರೀ ಕುದ್ರೋಳಿ ಕ್ಷೇತ್ರದಲ್ಲಿ ನವ ದುರ್ಗೆಯರು, ಗಣಪತಿ ಹಾಗೂ ಶಾರದಾ ಮಾತೆಯ ವಿಗ್ರಹಗಳನ್ನು ಅ.7ರಂದು ಪ್ರತಿಷ್ಠಾನೆ ಮಾಡಲಾಗಿದ್ದು ನವರಾತ್ರಿ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ದಸರಾ ಮಂಟಪದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಲಾಯಿತು. ಈ ಸಂದರ್ಭ ಶಾಸಕರಾದ ಯು.ಟಿ.ಖಾದರ್, ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಹರೀಶ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಕ್ಷೇತ್ರಾಡಳಿತ ಸಮಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಮೂಡ ಅಧ್ಯಕ್ಷ ರವಿಶಂಕರ ಮಿಜಾರು, ಪದ್ಮ ರಾಜ್, ಕಳ್ಳಿಗೆ ತಾರಾನಾಥ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜ, ಮಾಜಿ ಮೇಯರ್ ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.