ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ
ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ತೀರ್ಮಾನ ಮಾಡಿದ್ದೇನೆ ಎಂದು ಅವರು ತಿಳಿಸಿದರು.ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುತ್ತೇನೆ. ನಂತರ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆಯುತ್ತೇನೆ ಎಂದು ಅವರು ತಿಳಿಸಿದರು.