ಕ್ರೈಸ್ತರ ಮೇಲಿನ ದಾಳಿಗೆ ಖಂಡನೆ ಎಸ್‌ಡಿಪಿಐಯಿಂದ ಕಾನೂನು ಹೋರಾಟ

ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಧಾರ್ಮಿಕ ಮುಖಂಡರುಗಳನ್ನು ಬಂಧಿಸುತ್ತಿರುವ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ.

ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೊ ಫ್ರಾಂಕೊ ಅವರು ಕ್ರೈಸ್ತ ಸಂಘಟನೆಗಳ ಕಾನೂನು ಹೋರಾಟ ಮತ್ತು ಶಾಂತಿಯುತ ಪ್ರತಿಭಟನೆಗೆ ಎಸ್‌ಡಿಪಿಐ ಬೆಂಬಲಿಸುತ್ತದೆ. ರಾಜ್ಯದಲ್ಲಿರುವ ಕ್ರೈಸ್ತ ಶಿಕ್ಷಣ, ಆರೋಗ್ಯ ಮತ್ತಿತ್ತರ ಸೇವಾ ಸಂಸ್ಥೆಗಳಲ್ಲಿ ಲಕ್ಷಾಂತರ ಹಿಂದು, ಮುಸ್ಲಿಂ ಬಾಂಧವರು ಪ್ರಯೋಜನ ಪಡೆಯುತ್ತಿದ್ದಾರೆ. ಎಲ್ಲಿಯೂ ಮತಾಂತರಕ್ಕೆ ಒತ್ತಾಯ, ಪ್ರೇರಣೆ ನೀಡಿದ ಉದಹರಣೆಗಳಿಲ್ಲ. ಆದರೂ ಸುಳ್ಳು ಆರೋಪ ಹೊರಿಸಿ ಬಿಜೆಪಿ ಬೆಂಬಲಿತ ಸಂಘಟನೆಗಳು ಕ್ರೈಸ್ತರ ವಿರುದ್ಧ ದಾಳಿ-ಅಪಪ್ರಚಾರ ಖಂಡನೀಯ ಎಂದು ಹೇಳಿದರು.

ರಾಜ್ಯ ಉಪಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಮಾತನಾಡಿ, ರಾಜ್ಯ ಸರ್ಕಾರವು ಕೇವಲ ಕ್ರೈಸ್ತರ ಪ್ರಾರ್ಥನಾ ಮಂದಿರ, ಧರ್ಮ ಗರುಗಳು, ಆಸ್ತಿ ಪಾಸ್ತಿಗಳ ಸರ್ವೇ ನಡೆಸಬೇಕೆಂದು ಸರ್ಕಾರ ಅಧಿಕಾರಿಗಳಿಗೆ ಆದೇಶ ನೀಡುವುದು ಸರಿಯಲ್ಲ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಎಸ್‌ಡಿಪಿಐ ರಾಜ್ಯ ಮಾಧ್ಯಮ ಉಸ್ತುವಾರಿ ಅಕ್ರಮ್ ಹಸನ್, ನೂತನ ಜಿಲ್ಲಾಧ್ಯಕ್ಷ ಅಬೂಬಕರ್ ಕುಲಾಯಿ, ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.