ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ: ಧರೆಗುರುಳಿದ ವಿದ್ಯುತ್ ಕಂಬ
ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ.
ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ವಿದ್ಯುತ್ ಕಂಬ ತೆರವಿಗೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.