ಹೆಚ್ಚುತ್ತಿರುವ ಲವ್ ಜಿಹಾದ್‍ : ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು ಹೊಂದಿರುವ ಉಗ್ರಗಾಮಿ ಸಂಘಟನೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲು ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾದಳದ ಕಚೇರಿಯಲ್ಲಿ ತೆರೆಯಬೇಕು ಎಂದು ಆಗ್ರಹಿಸಿದರು.

Related Posts

Leave a Reply

Your email address will not be published.