ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದರು.ಈ ಕುರಿತು ಹೇಳಿಕೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದೇ ವ್ಯವಸ್ಥಿತವಾಗಿ ಫಲಿತಾಂಶ ನೀಡಲಾಗುವುದು. ಯಾವುದೇ ಶ್ರೇಯಾಂಕ ನೀಡುವುದಿಲ್ಲ. ಅಂಕಗಳ ಆಧಾರದ ಮೇಲೆಯೇ ಸಿಬಿಎಸ್‌ಇ ಮಾದರಿಯಲ್ಲಿ ಎಸ್‌ಎಸ್‌ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕ ಆಧರಿಸಿ ಫಲಿತಾಂಶ ಪ್ರಕಟಿಸಲಾಗುವುದು. ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆದ ಮರು ದಿನವೇ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ನೋಂದಣಿ ನಂಬರ್ ಸಿಕ್ಕಿಲ್ಲ. ಹೀಗಾಗಿ ಫಲಿತಾಂಶ ನೋಡುವ ಬಗ್ಗೆ ಗೊಂದಲ ಏರ್ಪಟ್ಟಿದ್ದು, ಇದಕ್ಕೂ ಶಿಕ್ಷಣ ಇಲಾಖೆ ಪರಿಹಾರ ಕಂಡುಕೊಂಡಿದೆ. ಫಲಿತಾಂಶ ನೋಡುವ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸ ರಿಜಿಸ್ಟರ್ ನಂಬರ್ ಜನರೇಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ವೆಬ್ ತಾಣದಲ್ಲಿ know your Number ಅಯ್ಕೆ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು.ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಹೋಗಲಿದೆ. ಜತೆಗೆ ಆಯಾ ಕಾಲೇಜುಗಳಿಗೆ ಫಲಿತಾಂಶದ ವಿವರ ನೀಡಲಾಗುವುದು. ಫಲಿತಾಂಶದ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಖಚಿತ ಪಡಿಸಿಕೊಂಡು, ಜನರೇಟ್ ಆದ ರಿಜಿಸ್ಟರ್ ನಂಬರ್ ಪರಿಶೀಲಿಸಿ ಜು. 20 ರ ನಂತರ ಫಲಿತಾಂಶ ನೋಡಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Related Posts

Leave a Reply

Your email address will not be published.