ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ನಿವಾರಿಸಲು ಇದು ಸಹಕಾರಿಯಾಗಿದೆ. ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಿಂದ ಬಂಟ್ಸ್ ಹಾಸ್ಟೆಲ್ ಮೂಲಕ ಹಾದು ಹೋಗುವ ಬಸ್ ಗಳು ರಸ್ತೆಯಲ್ಲಿಯೇ ನಿಲ್ಲಿಸುವುದರಿಂದ ಈ ಭಾಗದಲ್ಲಿ ವಿಪರೀತ ಟ್ರಾಫಿಕ್ ಜಾಮ್ ಉಂಟಾಗುತಿದ್ದು ಬಸ್ ಬೇ ನಿರ್ಮಾಣವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಬಸ್ ಬೇ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದೆ. ಜ್ಯೋತಿ ಟಾಕೀಸ್ ಪಕ್ಕದಲ್ಲಿ ಬಸ್ ಬೇ ನಿರ್ಮಿಸುವುದರಿಂದ ಇಲ್ಲಿನ ವಾಹನ ದಟ್ಟಣೆ ನಿವಾರಣೆಯಾಗಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ನಗರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.