ಟೋಕಿಯೋ ಒಲಿಂಪಿಕ್ಸ್: ಕುಸ್ತಿಪಟು ಬಜರಂಗ್ ಪೂನಿಯಾಗೆ ಕಂಚಿನ ಪದಕ

ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಪೈಲ್ವಾನ ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ 8-0 ಗೆಲುವು ದಾಖಲಿಸಿದರು.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸುವ ಭರವಸೆಯಾಗಿದ್ದ ಬಜರಂಗ್ ಪೂನಿಯಾ, ಗಾಯದ ಸಮಸ್ಯೆಯಿಂದಾಗಿ ಹಿನ್ನಡೆ ಅನುಭವಿಸಿದರು. ಆದರೂ ದೇಶಕ್ಕಾಗಿ ಕಂಚಿನ ಪದಕ ಗೆಲ್ಲುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬಜರಂಗ್ ಪೂನಿಯಾ, ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಆರನೇ ಕುಸ್ತಿಪಟು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಲ್ಲದೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿರುವ ಎರಡನೇ ಕುಸ್ತಿಪಟು ಎಂದೆನಿಸಿದ್ದಾರೆ. ಈ ಮುನ್ನ ಪುರುಷರ 57 ಕೆ.ಜಿ. ವಿಭಾಗದಲ್ಲಿ ರವಿಕುಮಾರ್ ದಹಿಯಾ, ಬೆಳ್ಳಿ ಪದಕ ಜಯಿಸಿದ್ದರು.

 

 

 

Related Posts

Leave a Reply

Your email address will not be published.