ಡಾ.ರಾಮಕೃಷ್ಣ ಶಿರೂರುಗೆ ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025ಕ್ಕೆಆಯ್ಕೆ ಆಯ್ಕೆಯಾಗಿರುತ್ತಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.
2025 ಜನವರಿ12 ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಅವರು ತಿಳಿಸಿರುತ್ತಾರೆ.
ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.
1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, 1995 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.
ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ
ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ಡಾ.ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.