ಡಿಕೆಶಿ ಕಪಾಳಮೋಕ್ಷ ವಿಚಾರ: ಮಂಗಳೂರಿನಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ

ಮಂಗಳೂರು: ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ, ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ ಅಪೇಕ್ಷೆ ಮತ್ತು ಬೇಡಿಕೆಯಿಟ್ಟು ಬರುತ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು ನಮ್ಮ ಸಂಸ್ಕೃತಿ. ಯಾರೇ ರಾಜಕಾರಣಿ ಆದ್ರೂ ಎಲ್ಲೆ ಮೀರಿ ವರ್ತಿಸಬಾರದು. ಇದು ಸರಿಯಾದ ನಡತೆ ಅಲ್ಲ. ಕಾಂಗ್ರೆಸ್ಸಿಗರ ಸಂಸ್ಕೃತಿ ಏನು ಅನ್ನೋದು ಇದರಿಂದ ಗೊತ್ತಾಗುತ್ತೆ ಎಂದು ಅವರು ಹೇಳಿದ್ರು. ಇನ್ನು ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆ ತಟ್ಟಿ, ಯುದ್ದಕ್ಕೆ ಕರೆದು ಒಳಹೊಕ್ಕಿದವರು, ದೇವಸ್ಥಾನದ ಆಗಿರುವ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ..? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿದ್ರೆ ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಅವರೇ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ರು.

Related Posts

Leave a Reply

Your email address will not be published.