ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರಿಂದ ಗಡಿಭಾಗದಲ್ಲಿ ಪ್ರತಿಭಟನೆ
ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿದರು.
ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಸಾಲಾಗಿ ನಿಂತಿತ್ತು. ಇನ್ನು ಪ್ರತಿಭಟನೆ ಮಧ್ಯೆಯೂ ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಅವರು ಗಡಿ ಪರಿಶೀಲನೆ ನಡೆಸಿ, ತೆರಳಿದ್ದಾರೆ.