ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ನೂತನ ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧಿಕಾರ ಸ್ವೀಕರಿಸಿದ್ದಾರೆ. ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರಿಗೆ ಸೇವಾ ನಿವೃತ್ತರಾಗಿರುವ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಜಂಟಿ ನಿರ್ದೇಶಕಾದ ಪ್ರೊ. ವಸಂತರಾಜ ಶೆಟ್ಟಿ ಉಪಸ್ಥಿತರಿದ್ದರು.

ಡಾ. ಎಕ್ಕಾರು ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್.ಎಸ್.ಎಸ್. ಕೋಶದಲ್ಲಿ ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಮತ್ತು ಸರಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿಯಾಗಿ 6 ವರ್ಷ ಸೇವೆ ಸಲ್ಲಿಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯ ವಿವಿಧ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ, ಸಹ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿದ್ದಾರೆ. ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಕ ಪ್ರಾಂಶುಪಾಲರಾಗಿ 4 ವರ್ಷ ಸೇವೆಸಲ್ಲಿಸಿದ್ದಾರೆ. ಜಾನಪದ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕೃತಿಗಳನ್ನು ಪ್ರಕಟಿಸಿದ್ದಾರೆ. ಡಾ. ಎಕ್ಕಾರು ಉಡುಪಿ ತಾಲೂಕು  ಕನ್ನಡ ಸಾಹಿತ್ಯ ಪರಿಷತ್‌ನ  ಅಧ್ಯಕ್ಷರಾಗಿ, ಮಂಗಳೂರು ವಿ.ವಿ. ಎನ್.ಎಸ್.ಎಸ್. ಸಂಯೋಜನಾಧಿಕಾರಿಯಾಗಿ, ಕನ್ನಡ ಅಧ್ಯಾಪಕರ ಸಂಘದ  ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ. ಅವರು ಎನ್.ಎಸ್.ಎಸ್.ಗೆ ಸಲ್ಲಿಸಿದ ಸೇವೆಗಾಗಿ ರಾಜ್ಯ ಸರಕಾರದಿಂದ ಅತ್ಯುತ್ತಮ ಸಂಯೋಜನಾಧಿಕಾರಿಯಾಗಿ ರಾಜ್ಯ ಪ್ರಶಸ್ತಿ ಹಾಗೂ ಕೇಂದ್ರ ಸರಕಾರದಿಂದ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

Related Posts

Leave a Reply

Your email address will not be published.