ತೆಂಕನಿಡಿಯೂರು ಕಾಲೇಜು : ರಾಷ್ಟ್ರೀಯ ಕ್ರೀಡಾ ದಿನ ಪ್ರಯುಕ್ತ ರಕ್ತದಾನ ಶಿಬಿರ
ಉಡುಪಿ : ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ, ಇದರ ದೈಹಿಕ ಶಿಕ್ಷಣ ವಿಭಾಗ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ (ರಿ), ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಶನ್ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಸಂಘಟಿಸಲಾಗಿತ್ತು.
ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ಹರಿಯಪ್ಪ ಕೋಟ್ಯಾನ್ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಮುಂದಾಳು ಶ್ರೀ ಗೋಪಾಲ ಸಿ. ಬಂಗೇರ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷರು ಹಾಗೂ ಲಯನ್ಸ್ ಕ್ಲಬ್ ಮಲ್ಪೆ ಇದರ ಅಧ್ಯಕ್ಷರಾದ ಶ್ರೀ ಕೃಷ್ಣನಾಂದ ಮಲ್ಪೆ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ದಯಾನಂದ ಶೆಟ್ಟಿ , ಕ್ರೀಡಾ ಯುವಜನ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಅಮೆಚೂರು ಅತ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ಕೆಂಪರಾಜ್, ಮಣಿಪಾಲ ರಕ್ತನಿಧಿಯ ಡಾ. ಶಮ್ಮೀಶಾಸ್ತ್ರೀ, ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಸುರೇಶ್ ರೈ ಕೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ಬೋಧಕರಾದ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿ, ಶ್ರೀ ದಯಾನಂದ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಭಾರತದ ಹಾಕಿ ಕ್ರೀಡೆಯ ಧ್ಯಾನ್ಚಂದ್ ರವರ ಭಾವಚಿತ್ರಕ್ಕೆ ಪುಪ್ಪವನ್ನು ಸಲ್ಲಿಸುವುದರ ಮೂಲಕ ಗೌರವವನ್ನು ಸಲ್ಲಿಸಲಾಯಿತು.